
ಪ್ರಗತಿವಾಹಿನಿ ಸುದ್ದಿ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಭೂಕಂಪ ಸಂಭವಿಸಿದ್ದು, ಆತಂಕಕ್ಕೀಡಾದ ಜನರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.5ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಈ ಬಗ್ಗೆ ಮಾಹಿತಿ ನೀಡಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಸುತ್ತಮುತ್ತಿಲಿನ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ್ದು, ಭೂಮಿ ನಡುಗಿದ ಅನುಭವವಾಗಿದೆ. ಇಂದು ನಸುಕಿನ ಜಾವ 2:04ರ ಸುಮಾರಿಗೆ ಭೂಕಂಪನ ಸಂಭವಿಸಿದೆ.
ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಮುನ್ನಚ್ಚರಿಕೆಗಾಗಿ ಜಿಲ್ಲಾಡಳಿತಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




