
ಪ್ರಗತಿವಾಹಿನಿ ಸುದ್ದಿ: ಅಜ್ಜ-ಅಜ್ಜಿ ಮನೆಯಲ್ಲಿದ್ದ ಬಾಲಕಿ ಮೇಲೆ ತಾತನೇ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ, ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿಗೆ ಚೂರು ತೋರಿಸಿ ಬೆದರಿಕೆ ಹಾಕಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ತಾತಯತ್ನಿಸಿದ್ದು, ಈ ದುಷ್ಕೃತ್ಯ ಕಂಡ ವ್ಯಕ್ತಿಯೊಬ್ಬರು 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ವ್ಯಕ್ತಿ ಬಾಲಕಿಯನ್ನು ರಕ್ಷಿಸಿದ್ದಾರೆ. ಆರೋಪಿ ಶರಣಪ್ಪ (75) ಎಂಬಾತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಗಳನ್ನು ಅಜ್ಜ-ಅಜ್ಜಿ ಮನೆಯಲ್ಲಿ ಬಿಟ್ಟು ಬಾಲಕಿ ತಾಯಿ ಬೆಂಗಳೂರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಜ್ಜ, ಮೊಮ್ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ.
ಬಾಲಕಿಗೆ ಚಿಕಿತ್ಸೆ ಹಾಗೂ ರಕ್ಷಣೆ ಹಿನ್ನೆಲೆಯಲ್ಲಿ ಬಾಲಮಂದಿರಕ್ಕೆ ರವಾನಿಸಲಾಗಿದೆ. ಕೆಂಭಾವಿ ಪೊಲೀಸರು ಆರೋಪಿ ಶರಣಪ್ಪ ನನ್ನು ಬಂಧಿಸಿ ಪೋಕ್ಸೋ ಕೇಸ್ ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




