Kannada NewsKarnataka NewsPolitics

*ಬಿಜೆಪಿ ಭದ್ರ ಕೋಟೆಯಿಂದಲೇ ಆರಂಭವಾಯ್ತು ಕಾಂಗ್ರೆಸ್ ಪಾದಯಾತ್ರೆ: ಭಾರತ್ ಜೋಡೋ-2ಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಈಗಿನಿಂದಲೇ ತಯಾರಿ ನಡೆಸಿದ್ದು, ಭಾರತ್ ಜೋಡೋ-2 ಪಾದಯಾತ್ರೆಗೆ ಚಾಲನೆ ನೀಡಿದೆ.

ಬಿಜೆಪಿ ಭದ್ರ ಕೋಟೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಭಾರತ್ ಜೋಡೋ-2 ಯಾತ್ರೆಗೆ ಚಾಲನೆ ನೀಡಲಾಯಿತು. ಸೇವಾದಳದ ಬಾವುಟ ಹಾರಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಭಾರತ್ ಜೋಡೋ-2 ಕಾಂಗ್ರೆಸ್ ಪಾದಯಾತ್ರೆಗೆ ಚಾಲನೆ ನೀಡಿದರು.

ಇಂದು ಕೋಟೆ, ಹೊಸನಗರ ಕ್ರಾಸ್, ನೆಲವೊಡ್ಲು ಮಾರ್ಗವಾಗಿ ಯಾತ್ರೆ ಸಾಗಲಿದೆ. ಇಂದು 9 ಕಿ.ಮೀವರೆಗೆ ಕಾಂಗ್ರೆಸ್ ಪಾದಯಾತ್ರೆ ಸಾಗಲಿದೆ. ಪಾದಯಾತ್ರೆಯಲ್ಲಿ ಬಿ.ಕೆ.ಹರಿಪ್ರಸಾದ್, ಕಾಂಗ್ರೆಸ್ ಶಾಸಕರು, ಸಚಿವರು, ಲಕ್ಷಾಂತರ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button