Kannada NewsKarnataka NewsLatest

*ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆ: SIT ತಂಡದಿಂದ ತನ್ನನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದ ASP*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಚಿಸಲಾದ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ಆರಂಭಿಸಿದೆ. ಆದರೆ ಸಹಾಯಕ ಪೊಲೀಸ್ ಅಧೀಕ್ಷಕ (ಎಎಸ್ಪಿ)ಯೊಬ್ಬರು ತಮ್ಮನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಎಸ್ ಐಟಿ ಎ ಎಸ್ ಪಿ ವೆಂಕಟೇಶ್ ಪ್ರಸನ್ನ ಅವರು ಎಸ್ ಐಟಿಯಿಂದ ಹೊರಬರಲು ನಿರ್ಧರಿಸಿದ್ದಾರೆ. ತಮ್ಮನ್ನು ತಂಡದಿಂದ ಕೈಬಿಡುವಂತೆ ಕೋರಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ಆದೇಶಿಸಿದಾಗ, ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದವರು ಹೊಸ ತಂಡದಲ್ಲಿ ಇರಬಾರದು ಎಂದು ಸೂಚಿಸಿತ್ತು. ಸೆಪ್ಟೆಂಬರ್ 24ರಂದು ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ ಐವರ ತಂಡವನ್ನು ಸರ್ಕಾರ ರಚಿಸಿತ್ತು. ಈ ತಂಡದಲ್ಲಿ ಎಎಸ್ ಪಿ ವೆಂಕಟೇಶ್ ಪ್ರಸನ್ನ ಅವರ ಹೆಸರು ಇತ್ತು.

ಸಾಮಾಜಿಕ ಹೋರಾಟಗಾರರು ಮತ್ತು ಸೌಜನ್ಯ ಕುಟುಂಬದವರು ಎಸ್‌ಐಟಿ ತಂಡದಲ್ಲಿ ವಿವಾದಿತ ಅಧಿಕಾರಿಗಳು ಇದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಎಎಸ್ ಪಿ ವೆಂಕಟೇಶ್ ಪ್ರಸನ್ನ ಅವರ ಮೇಲೆ ಭ್ರಷ್ಟಾಚಾರ ಮತ್ತು ಭೂಗತ ಪಾತಕಿಗಳ ಜೊತೆ ನಂಟು ಹೊಂದಿರುವ ಗಂಭೀರ ಆರೋಪಗಳಿವೆ. ಹಾಗಾಗಿ ಅವರನ್ನು ತಂಡದಿಂದ ಕೈಬಿಡುವಂತೆ ಒತ್ತಾಯಿಸಿದ್ದರು. ಈ ಆರೋಪದ ಬೆನ್ನಲ್ಲೇ ಇದೀಗ ಎಎಸ್ ಪಿ ವೆಂಕಟೇಶ್ ಪ್ರಸನ್ನ, ತನಿಖಾ ತಂಡದಿಂದ ಹಿಂದೆ ಸರಿಯಲು ನಿರ್ಧರಿಸಿ, ತಮ್ಮನ್ನು ಕೈ ಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button