Belagavi NewsBelgaum NewsKannada NewsKarnataka News

*ಬೆಳಗಾವಿ ಕ್ಯಾಂಟೋನ್ಮೆಂಟ್ ಮಂಡಳಿಯಿಂದ ಸ್ವಚ್ಛತಾ ಶ್ರಮದಾನ*

ಬೆಳಗಾವಿ ಕ್ಯಾಂಟೋನ್ಮೆಂಟ್ ಮಂಡಳಿಯಿಂದ ಸ್ವಚ್ಛತಾ ಶ್ರಮದಾನ

ಪ್ರಗತಿವಾಹಿನಿ ಸುದ್ದಿ/
ಬೆಳಗಾವಿ: ಸ್ವಚ್ಛತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಳಗಾವಿ ಕ್ಯಾಂಟೋನ್ಮೆಂಟ್ ಮಂಡಳಿ ವತಿಯಿಂದ “ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್” ಎಂಬ ಆಶಯದಡಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ವೆಂಗುರ್ಲಾ ರಸ್ತೆಯ ಗಾಂಧಿ ಸರ್ಕಲ್‌ನಲ್ಲಿ ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಬೆಳಗಾವಿ ಸಂಸದರು, ಗಣ್ಯರು, ಮಾಜಿ ಚುನಾಯಿತ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಕ್ಯಾಂಟೋನ್ಮೆಂಟ್ ಮಂಡಳಿ ಸಿಬ್ಬಂದಿ, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಕಾರ್ಯಕ್ರಮದ ಅಂಗವಾಗಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ (ನೂಕಡ್ ನಾಟಕ) ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಸಸಿ ನೆಡುವ ಕಾರ್ಯಕ್ರಮ, ಸ್ವಚ್ಛತಾ ಶ್ರಮದಾನ ಹಾಗೂ ಸ್ವಚ್ಛತಾ ಅಭಿಯಾನ ನಡೆಯಲಿದೆ.
ಸ್ವಚ್ಛತೆಯ ಮಹತ್ವವನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಲು ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಗುತ್ತದೆ. ಇದರ ಜೊತೆಗೆ ತ್ಯಾಜ್ಯ ವಿಂಗಡಣೆ ಕುರಿತು ಸಾರ್ವಜನಿಕರಿಗೆ ಮಾಹಿತಿ ಹಾಗೂ ಅರಿವು ಮೂಡಿಸಲಾಗುತ್ತದೆ.
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕ್ಯಾಂಟೋನ್ಮೆಂಟ್ ಮಂಡಳಿ ಮನವಿ ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button