Kannada NewsKarnataka NewsLatest

*BREAKING: ಎಂಆರ್‌ಪಿಎಲ್ ಘಟಕದಲ್ಲಿ ಸ್ಫೋಟ: ಓರ್ವ ಕಾರ್ಮಿಕ ಸಾವು*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್)ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಂದು ಮಧ್ಯಾಹ್ನ ಎಂಆರ್‌ಪಿಎಲ್​​ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸಾಅವನ್ನಪ್ಪಿದ್ದು, 9 ಕಾರ್ಮಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.

30 ವರ್ಷದ ಮನೀಶ್ ಕರ್ಕರ ಎಂಬಾತ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸುರತ್ಕಲ್ ನಿವಾಸಿ ರಾಜೇಶ್​​​ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೇಕಡಾ 35ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಉಳಿದ ಗಾಯಾಳುಗಳಾದ ಪ್ರಸಾದ್​, ಇಂದ್ರಜೀತ್​, ರಾಮನ್​ಗೆ ಎಜಿ ಆಸ್ಪತ್ರೆಗೆ ಮತ್ತು ಗಾಯಾಳುಗಳಾದ ಜೆರೋಮ್​, ಜಯರಾಮ್​, ಅವಿನಾಶ್ ಹಾಗೂ ಅಕ್ಷಯ್​ ಎಂಬುವರಿಗೆ MRPL ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button