*ಚಾಮುಂಡಿ ಬೆಟ್ಟಕ್ಕೆ ಸೂಪರ್ಸ್ಟಾರ್ ರಜನಿಕಾಂತ್ ಭೇಟಿ*

ಪ್ರಗತಿವಾಹಿನಿ ಸುದ್ದಿ: ಕಾಲಿವುಡ್ನ ಸೂಪರ್ಸ್ಟಾರ್ ರಜನಿಕಾಂತ್ಗೆ ಮೈಸೂರಿನಲ್ಲಿ ಸಾಕಷ್ಟು ಅಭಿಮಾನಿ ಬಳಗವಿದೆ. ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಮೈಸೂರಿನಲ್ಲಿ ತಂಗಿರುವ ಸೂಪರ್ಸ್ಟಾರ್ ಇಂದು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ರಜನಿಕಾಂತ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಿದ್ದಂತೆ ದೇವಸ್ಥಾನದ ಸುತ್ತಮುತ್ತ ಅಭಿಮಾನಿಗಳಲ್ಲಿ ಉತ್ಸಾಹ ಕಂಡುಬಂದಿದೆ. ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದು, ಕೆಲವರು ರಜನಿಕಾಂತ್ ಅವರನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.
ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿದ ರಜನಿಕಾಂತ್ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಪಡೆದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಹೂವಿನ ಹಾರ ಹಾಕಿ ನಟನನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಚಿತ್ರದ ಚಿತ್ರೀಕರಣದ ನಿಮಿತ್ತ ರಜನಿಕಾಂತ್ ಸದ್ಯ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಯಾವ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿದ್ದಾರೆ ಹಾಗೂ ಚಿತ್ರೀಕರಣದ ಮುಂದಿನ ವೇಳಾಪಟ್ಟಿ ಏನು ಎಂಬ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ರಜನಿಕಾಂತ್ ಅವರ ಚಾಮುಂಡಿ ಬೆಟ್ಟ ಭೇಟಿ ಹಿನ್ನೆಲೆಯಲ್ಲಿ ಅಭಿಮಾನಿಗಳು ನೆಚ್ಚಿನ ನಟನ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ರಜನಿಕಾಂತ್ ಮತ್ತೆ ಚಿತ್ರೀಕರಣಕ್ಕೆ ತೆರಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



