Belagavi NewsBelgaum NewsElection NewsKannada NewsKarnataka NewsNational

*ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ: ಸಂಘಟನೆಗಳಿಂದ ವಿಜಯೋತ್ಸವ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕನ್ನಡ ಪರ ಮಹತ್ವದ ಗೊತ್ತುವಳಿ ಅಂಗೀಕಾರವಾದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು.

ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಹಾಗೂ ಚನ್ನಮ್ಮ ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ಸರ್ಕಾರದ ಪರ ಘೋಷಣೆಗಳನ್ನು ಕೂಗಿ ಪಾಲಿಕೆಯ ನಿರ್ಧಾರವನ್ನು ಸ್ವಾಗತಿಸಿದರು.

1988ರಲ್ಲಿ ವಿಧಾನಸಭೆಯಲ್ಲಿ ಅಂಗೀಕರಿಸಲಾದ ಮಹಾಜನ್ ವರದಿಯ ನಿರ್ಣಯದಂತೆ ಮುಂದುವರಿಯುವ ಕುರಿತು ಪಾಲಿಕೆ ಸಭೆಯಲ್ಲಿ ಗೊತ್ತುವಳಿ ಅಂಗೀಕರಿಸಲಾಗಿದೆ ಎಂದು ಹೋರಾಟಗಾರರು ತಿಳಿಸಿದರು.

ಕಳೆದ ಆರು ತಿಂಗಳಿಂದ ಕನ್ನಡಪರ ನಿರ್ಣಯಕ್ಕಾಗಿ ನಿರಂತರ ಹೋರಾಟ ನಡೆಸಲಾಗಿತ್ತು. ಸರ್ಕಾರದ ಮಧ್ಯಪ್ರವೇಶ ಹಾಗೂ ಪಾಲಿಕೆ ಸೂಪರ್‌ಸೀಡ್ ಆಗುವ ಆತಂಕದ ನಡುವೆಯೇ ಇಂದು ನಿರ್ಣಯ ಕೈಗೊಂಡಿರುವುದು ಸಂತಸ ತಂದಿದೆ ಎಂದು ಕನ್ನಡಪರ ಹೋರಾಟಗಾರರು ಹೇಳಿದರು.

ಹೋರಾಟಗಾರ ಅಶೋಕ ಚಂದರಗಿ ನೇತೃತ್ವದಲ್ಲಿ ನಡೆದ ವಿಜಯೋತ್ಸವದಲ್ಲಿ ಕರವೇ ಶಿವರಾಮೇಗೌಡ ಬಣ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button