Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಮಧ್ಯರಾತ್ರಿ ಶುರುವಾಗುವ ಗುಡುಗು, ಮಳೆ ಬೆಳಗಿನವರೆಗೂ ಧಾರಾಕಾರವಾಗಿ ಸುರಿದು, ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಗದಗ, ಧಾರವಾಡ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಬಹುತೇಕ ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button