CrimeKannada NewsKarnataka News

*ಗಂಡ-ಹೆಂಡತಿ ಜಗಳ: ಬಾಡಿಗೆ ಮನೆಗೆ ಬೆಂಕಿ ಇಟ್ಟ ಭೂಪ*

ಪ್ರಗತಿವಾಹಿನಿ ಸುದ್ದಿ: ಗಂಡ-ಹೆಂಡತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬ ತನ್ನ ಬಾಡಿಗೆ ಮನೆಗೆ ಬೆಂಕಿ ಹಚ್ಚಿದ ಘಟನೆ ಧಾರವಾಡದ ಭೂಸಪ್ಪ ಚೌಕ್ ಬಳಿಯ ಕುರುಬರ ಓಣಿಯಲ್ಲಿ ನಡೆದಿದೆ.

ಕುರುಬರ ಓಣಿಯ ಚವಡಿ ಎಂಬುವವರ ಮನೆಯಲ್ಲಿ ಜಾವೀದ್ ಎಂಬಾತ ಬಾಡಿಗೆಗೆ ವಾಸವಿದ್ದ ಎನ್ನಲಾಗಿದೆ. ಜಾವೀದ್ ಹಾಗೂ ಆತನ ಪತ್ನಿ ನಡುವೆ ಜಗಳ ನಡೆದಿದ್ದು, ಬಳಿಕ ಜಾವೀದ್ ಮನೆಯಲ್ಲಿದ್ದ ಹಾಸಿಗೆಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯೊಳಗಿಂದ ಬೆಂಕಿಯ ಕೆನ್ನಾಲಿಗೆ ಹೊರಭಾಗಕ್ಕೂ ಚಾಚಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಬೆಂಕಿ ನಿಯಂತ್ರಣಕ್ಕೆ ಬಂದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಘಟನೆ ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button