Belagavi NewsBelgaum NewsCrimeKannada NewsKarnataka NewsTravel
*ಮಾಂಜಾ ದಾರಕ್ಕೆ ಯುವಕ ಬಲಿ: ಹೆದ್ದಾರಿಯಲ್ಲಿ ಬೈಕ್ ಸವಾರನ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿಯ ಗಾಂಧಿನಗರ ಸಮೀಪದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಮಹಾಂತೇಶ್ ನಗರದ ನಿವಾಸಿ ಧ್ರುವ ಸಂತೋಷ ಕರ್ಜಗಿ (19) ಎಂದು ಗುರುತಿಸಲಾಗಿದೆ. ಧ್ರುವ ಅವರು ಬೈಕ್ನಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಮಾಂಜಾ ದಾರ ಕುತ್ತಿಗೆಗೆ ಸಿಲುಕಿದೆ.
ಮಾಂಜಾ ದಾರದಿಂದ ಕುತ್ತಿಗೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದ ಧ್ರುವ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಬೆಳಗಾವಿ ಉತ್ತರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



