*ಸೌಜನ್ಯ ಹತ್ಯೆ ಪ್ರಕರಣ: SIT ಸಭೆಯಲ್ಲಿ ಮಹತ್ವದ ನಿರ್ಧಾರ: ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ರಚನೆಯಾಗಿರುವ ಎಸ್‌ಐಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಓರ್ವ ಹಿರಿಯ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗಿದೆ.
ಲೋಕೇಶ್ ಬಿ ಜಗಲಾಸರ್ ಅವರನ್ನು ಪ್ರಕರಣದ ತನಿಖಾ ಅಧಿಕಾರಿಯಾಗಿ ಎಸ್‌ಐಟಿ ಮುಖ್ಯಸ್ಥ ಎನ್.ಶಶಿಕುಮಾರ್ ನೇಮಿಸಿದ್ದಾರೆ. ಪ್ರಕರಣದ ತೀವ್ರತೆ, ಗಂಭೀರತೆ ಅರಿತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ತನಿಖಾ ಅಧಿಕಾರಿಗೆ ಸಹಾಯಕ ತನಿಖಾ ಅಧಿಕಾರಿಯಾಗಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇಮಕಗೊಂಡಿದ್ದಾರೆ. ಒರ್ವ ಐಪಿಎಸ್ ಹಾಗೂ ಓರ್ವ ಕೆಎಸ್‌ಪಿಎಸ್ ಅಧಿಕಾರಿಗಳಿಂದ ತನಿಖೆ ನಡೆಯಲಿದೆ.
ಲೋಕೇಶ್ ಬಿ ಜಗಲಾಸರ್ ಈ ಹಿಂದೆ ಬಾಗಲಕೋಟೆ ಹಾಗೂ ಧಾರವಾಡದಲ್ಲಿ ಎಸ್‌ಪಿಯಾಗಿ, ಬೆಂಗಳೂರು ನಗರದಲ್ಲಿ ಡಿಸಿಪಿಯಾಗಿ ಕೆಲಸ ಮಾಡಿದ್ದರು. ಪ್ರಸ್ತುತ ಸಿಐಡಿಯಲ್ಲಿ ಎಸ್‌ಪಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




