Kannada NewsNationalPolitics

*ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯಗೆ ಬರೋಬ್ಬರಿ 8.13 ಕೋಟಿ ವಂಚನೆ: ಗೋವಾ ಕಾರ್ಪೊರೇಟರ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯಗೆ ಬರೋಬ್ಬರಿ 8.13 ಕೋಟಿ ವಂಚನೆ ಮಾಡಿದ ಆರೋಪದಲ್ಲಿ ಗೋವಾ ಕಾರ್ಪೊರೇಟರ್ ಓರ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಗೋವಾದಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಜಮೀನು ಕೊಡಿಸುವುದಾಗಿ ನಂಬಿಸಿ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ಅವರ ರಿಯಲ್ ಎಸ್ಟೇಟ್ ಕಂಪನಿಗೆ 8.13 ಕೋಟಿ ರೂ. ವಂಚಿಸಿದ್ದ ಆರೋಪದಡಿ, ಗೋವಾದ ಮಪುಸಾ ನಗರಸಭೆ ಸದಸ್ಯ ತಾರಕ್ ಮಂಗೇಶ್ ಅರೋಲ್ಕರ್ (47) ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

2023ರಲ್ಲಿ 28,825 ಚದರ ಮೀಟರ್ ಜಮೀನು ಖರೀದಿಗೆ ಒಪ್ಪಂದ ಮಾಡಿಕೊಂಡು ಹಣ ಪಡೆದಿದ್ದ ತಾರಕ್, ನೋಂದಣಿ ಮಾಡಿಕೊಡದೆ ಅದೇ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿ ವಂಚಿಸಿದ್ದ.

ಈ ಹಿನ್ನೆಲೆಯಲ್ಲಿ ಕಂಪನಿ ಪ್ರತಿನಿಧಿ ದರ್ಶನ್ ನೀಡಿದ ದೂರಿನನ್ವಯ, ಈ ಹಿಂದೆ ಬೇರೆ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ತಾರಕ್‌ನನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದು ಸದಾಶಿವನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಯೋಗೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button