
ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಇದೀಗ ಸಂಕಷ್ಟ ಎದುರಾಗಿದೆ.
ಪ್ರಕರಣದ ಮಾಫಿ ಸಾಕ್ಷಿ ಪ್ರದೋಷ್ ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದನ್ನು ಸ್ಕ್ರೀನ್ ರೆಕಾರ್ಡ್ ಮಾಡಿ ಕೆಲ ಯೂಟ್ಯೂಬರ್ ಗಳು ಸೋಷಿಯಲ್ ಮೀಡಿಯಾ ಹಾಗೂ ಯೂಟ್ಯೂಬ್ ಗಳಲ್ಲಿ ಅಪ್ ಲೋಡ್ ಮಾಡಿದವರು ಹಾಗೂ ಯೂಟ್ಯೂಬರ್ಗಳನ್ನು ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಮಾಫಿ ಸಾಕ್ಷಿ ಪ್ರದೋಷ್ ನೀಡಿದ್ದ ಹೇಳಿಕೆಯ ವಿಡಿಯೋವನ್ನು ದುರ್ಬಳಕೆ ಮಾಡಿಕೊಂಡು ಜಾಲತಾಣಗಳಲ್ಲಿ ವೈರಲ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರದ 59ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ.
ಪ್ರಕರಣದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿದ್ದ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆಯ ವಿಡಿಯೋವನ್ನು ಕೆಲವರು ಸ್ಕ್ರೀನ್ ರೆಕಾರ್ಡ್ ಮಾಡಿ ಯೂಟ್ಯೂಬ್ ಹಾಗೂ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ನ್ಯಾಯಾಲಯದ ಗೌಪ್ಯತೆಯನ್ನು ಉಲ್ಲಂಘಿಸಿ, ಈ ವಿಡಿಯೋವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
ಸಾಕ್ಷಿಯ ಹೇಳಿಕೆಯ ವಿಡಿಯೋವನ್ನು ಶೇರ್ ಮಾಡಿದ ಹಾಗೂ ಪೋಸ್ಟ್ ಮಾಡಿದ ಸೋಷಿಯಲ್ ಮೀಡಿಯಾ ಖಾತೆಗಳು ಮತ್ತು ಯೂಟ್ಯೂಬರ್ಗಳ ವಿರುದ್ಧ ‘ನ್ಯಾಯಾಂಗ ನಿಂದನೆ’ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಮತ್ತು ಕೋರ್ಟ್ ರಿಜಿಸ್ಟ್ರಾರ್ಗೆ ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




