Belagavi NewsBelgaum NewsKannada NewsKarnataka News

*ಮಾಂಜಾ ದಾರಕ್ಕೆ ಯುವಕ ಬಲಿ: ಮಾರಾಟಗಾರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಮೇಯರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಧ್ರುವ ಎಂಬ ಯುವಕ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪ್ರೀತಿ ಕಾಮಕರ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಮಾಂಜಾ ದಾರ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಅಂಗಡಿಯಲ್ಲಿ ಮಾಂಜಾ ದಾರ ಮಾರಾಟ ಮಾಡುತ್ತಿರುವುದು ಕಂಡುಬಂದರೆ, ಅಂತಹ ಅಂಗಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಾಂಜಾ ದಾರದ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಕುರಿತು ಪಾಲಿಕೆ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲದೆ, ಮಾಂಜಾ ದಾರ ಮಾರಾಟದ ಬಗ್ಗೆ ಅಂಗಡಿಗಳಲ್ಲಿ ತಪಾಸಣೆ ನಡೆಸುವಂತೆ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡುವುದಾಗಿ ಮೇಯರ್ ಹೇಳಿದ್ದಾರೆ.

ಮಾಂಜಾ ದಾರದಿಂದ ಯುವಕನೊಬ್ಬ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಮೃತ ಧ್ರುವನ ಕುಟುಂಬವನ್ನು ಭೇಟಿ ಮಾಡಿ ಪಾಲಿಕೆ ವತಿಯಿಂದ ಸಾಂತ್ವನ ಹೇಳುವುದಾಗಿ ಪ್ರೀತಿ ಕಾಮಕರ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button