*₹2.15 ಲಕ್ಷ ಮೌಲ್ಯದ ಹೆರಾಯಿನ್ ಜಪ್ತಿ; ಬೆಳಗಾವಿ ಪೊಲೀಸರಿಂದ ಓರ್ವನ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತನಿಂದ ₹2.15 ಲಕ್ಷ ಮೌಲ್ಯದ ಹೆರಾಯಿನ್ ಸೇರಿದಂತೆ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಬಂಧಿತನನ್ನು ಸಂದೀಪ ವಿಜಯ ಅನಗೋಳಕರ (27) ಎಂದು ಗುರುತಿಸಲಾಗಿದೆ. ಬೆಳಗಾವಿ ನಗರದ ಬಸವನಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಕಾರ್ಯಾಚರಣೆಯಲ್ಲಿ 10.77 ಗ್ರಾಂ ತೂಕದ ಹೆರಾಯಿನ್, ₹500 ಮೌಲ್ಯದ ನೋಕಿಯಾ ಮೊಬೈಲ್ ಸೇರಿದಂತೆ ಒಟ್ಟು ₹2,15,500 ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬೆಳಗಾವಿ ನಗರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಿಸಿಬಿ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಾಚರಣೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




