CrimeKannada NewsKarnataka NewsLatestNational

*CJP ಪ್ರತಿಭಟನೆಯಲ್ಲಿ ಹೃದಯಾಘಾತ*: *75 ವರ್ಷದ ಹಿರಿಯ ನಾಗರಿಕ ಸಾವು*

ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆಯಲ್ಲಿ 75 ವರ್ಷದ ಹಿರಿಯ ನಾಗರಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಘಟನೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅ.2ರಂದು ನಡೆದ ಸಿಜೆಪಿ ಪ್ರತಿಭಟನಾ ಸಮಾವೇಶದ ವೇಳೆ ನಡೆದಿದೆ.

ಮೃತರನ್ನು ಗೋಪಾಲಕೃಷ್ಣ ಸುಬ್ಬಯ್ಯ ಪಿಳ್ಳೈ (75) ಎಂದು ಗುರುತಿಸಲಾಗಿದೆ. ಗೋಪಾಲಕೃಷ್ಣ ಸುಬ್ಬಯ್ಯ ಅವರು ಪ್ರತಿಭಟನೆಯಲ್ಲಿ ಭಾಗವಹಿಸಲು ಸಂಜೆ ಸುಮಾರು 4.30ರ ವೇಳೆಗೆ ಶಿವಾಜಿ ಪಾರ್ಕ್‌ಗೆ ಆಗಮಿಸಿದ್ದರು.

ಗೋಪಾಲಕೃಷ್ಣ ಅವರಿಗೆ ಸುಮಾರು 5 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಈ ಬಗ್ಗೆ ಜೊತೆಗಿದ್ದ ಸ್ನೇಹಿತರಿಗೆ ತಿಳಿಸಿದ ಬಳಿಕ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಸ್ನೇಹಿತರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ಎಸ್‌ಐಆರ್‌ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗಿತ್ತು.

ಪ್ರತಿಭಟನೆಗೆ ಮುನ್ನ ಮುಂಬೈ ಪೊಲೀಸರು ಅನುಮತಿ ನಿರಾಕರಿಸಿದ್ದರೂ, ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ ಮುಂದುವರಿದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭದ್ರತಾ ವ್ಯವಸ್ಥೆಯನ್ನೂ ಕೈಗೊಳ್ಳಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಶಿವಾಜಿ ಪಾರ್ಕ್ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button