Kannada NewsKarnataka NewsLatestSports

*ಭಾರತ ಮಹಿಳಾ ಹಾಕಿ ತಂಡಕ್ಕೆ ಕೆಒಎ ಅಧ್ಯಕ್ಷರಾದ ಡಾ.ಕೆ.ಗೋವಿಂದರಾಜ್ ಅಭಿನಂದನೆ*

ಬೆಂಗಳೂರು: 44 ವರ್ಷಗಳ ಬಳಿಕ ಏಷ್ಯನ್ ಕ್ರೀಡಾಕೂಟದಲ್ಲಿ ಸ್ವರ್ಣ ಪದಕ ಜಯಿಸಿದ ಭಾರತ ಮಹಿಳಾ ಹಾಕಿ ತಂಡದ ಸಾಧನೆಯನ್ನು ‌ಫಿಬಾ ಏಷ್ಯಾ ಅಧ್ಯಕ್ಷರು, ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಕೆ. ಗೋವಿಂದರಾಜ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

1982ರಲ್ಲಿ ಕಡೆಯ ಬಾರಿಗೆ ಭಾರತ ಮಹಿಳಾ ಹಾಕಿ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿತ್ತು. ಇದೀಗ ಸಲೀಮಾ ಟೆಟೆ ಸಾರಥ್ಯದ ಭಾರತ ಸ್ವರ್ಣ ಪದಕ ಜಯಿಸುವ ಮೂಲಕ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ನೇರ ಅರ್ಹತೆ ಪಡೆದುಕೊಂಡಿದೆ. ಮಹಿಳಾ ತಂಡದ ಈ ಸಾಧನೆ ಮುಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಡಾ.ಕೆ.ಗೋವಿಂದರಾಜ್ ತಿಳಿಸಿದ್ದಾರೆ.

ಇಡೀ ದೇಶವೇ ಹೆಮ್ಮೆ ಪಡುವಂತ ಸಾಧನೆಯನ್ನು ಭಾರತ ಮಹಿಳಾ ತಂಡ ಮಾಡಿದೆ. ಈ ಸಾಧನೆ ಪ್ರತಿಯೊಬ್ಬ ಮಹಿಳಾ ಕ್ರೀಡಾ ಪಟುಗಳಿಗೆ ಸ್ಫೂರ್ತಿಯಾಗಿದೆ. ಭವಿಷ್ಯದಲ್ಲಿ ಒಲಿಂಪಿಕ್ಸ್ ನಂಥ ಪ್ರತಿಷ್ಠಿತ ಕ್ರೀಡಾಕೂಟದಲ್ಲೂ ಭಾರತ ಮಹಿಳಾ ಹಾಕಿ ತಂಡ ಪದಕ ಜಯಿಸಲಿ ಎಂದು ಹಾರೈಸುತ್ತೇನೆ ಎಂದು ಡಾ.ಕೆ.ಗೋವಿಂದರಾಜ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button