Belagavi NewsBelgaum NewsKannada NewsKarnataka NewsPolitics

*ಬೆಳಗಾವಿಯಲ್ಲಿ ತಾರಕಕ್ಕೇರಿದ SIR ಫೈಟ್: ಕಮಿಷನರ್ ಭೇಟಿಯಾದ ಬಿಜೆಪಿ ನಿಯೋಗ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ SIR ಪ್ರಕ್ರಿಯೆ ವಿಚಾರವಾಗಿ ಬೆಳಗಾವಿಯಲ್ಲಿ ಬಿಜೆಪಿ–ಕಾಂಗ್ರೆಸ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ.

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಸಿಟಿ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ, ಕಮಿಷನರ್ ಪ್ರಕಾಶ್ ನಿಕ್ಕಂ ಅವರಿಗೆ ಮನವಿ ಸಲ್ಲಿಸಿದೆ.

SIR ಪ್ರಕ್ರಿಯೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಒಳಗಾಗಿ ಪೊಲೀಸರು ಕಾರ್ಯನಿರ್ವಹಿಸಬಾರದು ಎಂದು ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಅಭಯ್ ಪಾಟೀಲ್, ಕಾಂಗ್ರೆಸ್ ಸರ್ಕಾರ ಹಾಗೂ ಶಾಸಕರ ಒತ್ತಡಕ್ಕೆ ಮಣಿದು ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಮತದಾರರ ಪಟ್ಟಿಯಲ್ಲಿ ಅನುಮಾನಾಸ್ಪದ ಹೆಸರುಗಳಿದ್ದರೆ Form-7 ಮೂಲಕ ಆಕ್ಷೇಪಣೆ ಸಲ್ಲಿಸಿ, ಮತದಾರರನ್ನು ಪರಿಶೀಲನೆ ಮಾಡುವಂತೆ ಮನವಿ ಮಾಡಿದ್ದೇವೆ. ಆದರೆ, ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದು ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದರು.

ಚುನಾವಣಾ ಆಯೋಗ ಮಾಡಬೇಕಾದ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದು ಅಭಯ್ ಪಾಟೀಲ್ ಗಂಭೀರ ಆರೋಪ ಮಾಡಿದ್ದು, SIR ವಿಚಾರದಲ್ಲಿ ಬೆಳಗಾವಿಯ ರಾಜಕೀಯ ವಾತಾವರಣ ಮತ್ತಷ್ಟು ಬಿಸಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button