Kannada NewsKarnataka NewsLatest

*ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಇದೆಯೇ? ಇಲ್ಲಿದೆ ಉದ್ಯೋಗಾವಕಾಶ*

ಪ್ರಗತಿವಾಹಿನಿ ಸುದ್ದಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕೆನರಾ ಬ್ಯಾಂಕ್ ಅತ್ಯುತ್ತಮ ಅವಕಾಶವನ್ನು ನೀಡುತ್ತಿದೆ.

ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ತರಬೇತಿ ಯೋಜನೆ (NATS) ಅಡಿಯಲ್ಲಿ ದೇಶಾದ್ಯಂತ ಖಾಲಿ ಇರುವ ಒಟ್ಟು 3,500 ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳನ್ನು ರಾಜ್ಯವಾರು ಕಾಯ್ದಿರಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದ ಪ್ರಾಯೋಗಿಕ ಕಾರ್ಯಾನುಭವ ಸಿಗಲಿದೆ.

ಈ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 1 ಅಕ್ಟೋಬರ್ 2026 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 17 ಅಕ್ಟೋಬರ್ 2026 ಕೊನೆಯ ದಿನವಾಗಿದೆ.

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 500ರೂ. ಆನ್‌ಲೈನ್ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ಪೂರ್ಣಗೊಳಿಸಿರಬೇಕು. 1 ಜನವರಿ 2023 ಮತ್ತು 1 ಸೆಪ್ಟೆಂಬರ್ 2026 ರ ನಡುವೆ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿಗೆ ಅರ್ಹರಾಗಿರುತ್ತಾರೆ. ಜೊತೆಗೆ, ಅಭ್ಯರ್ಥಿಗಳ ವಯಸ್ಸು 20 ರಿಂದ 28 ವರ್ಷಗಳ ಒಳಗಿರಬೇಕು (ಅಂದರೆ, ಅಭ್ಯರ್ಥಿಗಳ ಜನ್ಮ ದಿನಾಂಕವು 2 ಸೆಪ್ಟೆಂಬರ್ 1998 ರಿಂದ 1 ಸೆಪ್ಟೆಂಬರ್ 2006 ರ ನಡುವೆ ಇರಬೇಕು).

ಅಭ್ಯರ್ಥಿಗಳ ನೇರ ಆಯ್ಕೆ:
ಈ ಕೆನರಾ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಸಲ್ಲಿಸಿದ 12ನೇ ತರಗತಿ (PUC) ಮತ್ತು ಡಿಪ್ಲೊಮಾ/ಪದವಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಈ ಮೆರಿಟ್ ಪಟ್ಟಿಯನ್ನು ರಾಜ್ಯವಾರು ಪ್ರತ್ಯೇಕವಾಗಿ ತಯಾರಿಸಿ, ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಸರಳ ಹಂತಗಳು:
ಅರ್ಹ ಅಭ್ಯರ್ಥಿಗಳು NATS ನ ಅಧಿಕೃತ ಪೋರ್ಟಲ್ nats.education.gov.in ಗೆ ಭೇಟಿ ನೀಡಿ ‘Student Registration’ ಲಿಂಕ್ ಮೂಲಕ ಮೊದಲು ನೋಂದಾಯಿಸಿಕೊಳ್ಳಬೇಕು. ನೋಂದಣಿ ಪೂರ್ಣಗೊಂಡ ನಂತರ ಲಾಗಿನ್ ಆಗಿ ಅರ್ಜಿ ನಮೂನೆಯಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಬೇಕು. ನಂತರ 500ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲೇ ಪಾವತಿಸಿ, ಅರ್ಜಿಯನ್ನು ಸಬ್ಮಿಟ್ ಮಾಡಬೇಕು ಹಾಗೂ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರಿಂಟ್ ಔಟ್ ಪ್ರತಿಯನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಬೇಕು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button