
ಪ್ರಗತಿವಾಹಿನಿ ಸುದ್ದಿ: ಎರಡು ಕಾರುಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನ್ಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿರುವ ಮಹದೇಶ್ವರ ಐಟಿಐ ಕಾಲೇಜಿನ ಬಳಿ ಈ ಅಪಘಾತ ಸಂಭವಿಸಿದೆ.
ಸುವರ್ಣ, ಲೋಕೇಶ್, ಶ್ರೇಯಾ, ರುಕ್ಮಿಣಿ ಮಂಜೇಶ್, ಭಾಗ್ಯಮ್ಮ, ಮಹಾದೇವ, ಮನ್ಸೂರ್, ಮಹಮ್ಮದ್ ದೊಫಿ, ನಿಜಾವುದ್ದಿನ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಏಳು ಮಂದಿಗೆ ತೀವ್ರ ಗಾಯಗಳಾಗಿದ್ದು, ಕೈಕಾಲು ಮುರಿದಿವೆ ಎಂದು ತಿಳಿದು ಬಂದಿದೆ.
ಒಂದು ಕಾರಿನಲ್ಲಿದ್ದವರು ಮಲೆ ಮಹದೇಶ್ವರಕ್ಕೆ ತೆರಳುತ್ತಿದ್ದರು. ಇನ್ನೊಂದು ಕಾರಿನಲ್ಲಿದ್ದವರು ಕೊಳ್ಳೇಗಾಲದತ್ತ ತೆರಳುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



