Kannada NewsLatestNational

*ಗ್ರಾಹಕರಿಗೆ ನಯಾರಾ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರಿ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಕಚ್ಚಾ ತೈಲ ಮತ್ತು ಇಂಧನ ಉತ್ಪನ್ನಗಳ ಬೆಲೆ ಏರಿಕೆಯು ಚಿಲ್ಲರೆ ಮಾರಾಟದ ಲಾಭಾಂಶದ ಮೇಲೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ, ಖಾಸಗಿ ಇಂಧನ ಮಾರಾಟ ಸಂಸ್ಥೆಯಾದ ‘ನಯಾರಾ ಎನರ್ಜಿ’ ದೇಶಾದ್ಯಂತ ತನ್ನ ಕೇಂದ್ರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಭಾರಿ ಪ್ರಮಣದಲ್ಲಿ ಏರಿಕೆ ಮಾಡಿದೆ.

ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 3 ರೂಪಾಯಿಯಷ್ಟು ಹೆಚ್ಚಿಸಿದೆ. ಅಂತರರಾಷ್ಟ್ರೀಯ ಇಂಧನ ಬೆಲೆಗಳಲ್ಲಿನ ನಿರಂತರ ಏರಿಕೆಯ ನಡುವೆ, ಚಿಲ್ಲರೆ ಇಂಧನ ಬೆಲೆಗಳು ಮತ್ತು ಹೆಚ್ಚಿನ ಖರೀದಿ ವೆಚ್ಚಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಯಾರಾದ 7,000ಕ್ಕೂ ಹೆಚ್ಚು ಇಂಧನ ಕೇಂದ್ರಗಳಲ್ಲಿ ಪರಿಷ್ಕೃತ ದರಗಳನ್ನು ಜಾರಿಗೆ ತರಲಾಗಿದೆ.

ಈ ವರ್ಷ ಇಲ್ಲಿಯವರೆಗೆ ನಯಾರಾ ಮಾಡಿರುವ ಎರಡನೇ ಪರಿಷ್ಕರಣೆ ಇದಾಗಿದೆ. ಇದಕ್ಕೂ ಮುನ್ನ ಮಾರ್ಚ್‌ನಲ್ಲಿ, ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇದೇ ಪ್ರಮಾಣದಲ್ಲಿ ಹೆಚ್ಚಿಸಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button