*ಎಸ್.ಎಸ್.ಎಲ್.ಸಿ ಪರೀಕ್ಷೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: 2026-27ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಸಿದ್ದತೆ ನಡೆಸಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ.
ಹೊಸದಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವವರು, ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿ ಮತ್ತು ಪರೀಕ್ಷಾ ಶುಲ್ಕಗಳು ಏರಿಕೆ ಮಾಡಿ ಶಾಲಾ ಶಿಕ್ಷಣ ಮೌಲ್ಯಮಾಪನ ಮಂಡಳಿ ಆದೇಶ ಹೊರಡಿಸಿದೆ.
ಪರೀಕ್ಷಾ ಶುಲ್ಕವನ್ನು ಶೇ.5ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಹೊಸದಾಗಿ ಪರೀಕ್ಷೆ ಬರೆಯುವವರು, ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿ ಮತ್ತು ಪರೀಕ್ಷಾ ಶುಲ್ಕಗಳನ್ನು ಸಹ ಏರಿಕೆ ಮಾಡಲಾಗಿದೆ. ಪ್ರಥಮ ಬಾರಿಗೆ ಪರೀಕ್ಷೆ ಬರೆಯುವವರಿಗೆ ಪರೀಕ್ಷಾ ಶುಲ್ಕವನ್ನು ಶೇ.5ರಷ್ಟು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ 710 ರೂಪಾಯಿಗಳಿಂದ 746 ರೂಪಾಯಿಗೆ ಏರಿಕೆಯಾಗಿದೆ.
ಈಗಾಗಲೇ 10ನೇ ತರಗತಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೂ ಹೆಚ್ಚುವರಿ ಶುಲ್ಕ ಪಾವತಿ ಮಾಡುವಂತೆ ಶಾಲಾ ಶಿಕ್ಷಣ ಮೌಲ್ಯಮಾಪನ ಮಂಡಳಿ ಆದೇಶದಲ್ಲಿ ತಿಳಿಸಿದೆ. ಹೀಗಾಗಿ ಈಗಾಗಲೇ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು 76 ರೂ ಹೆಚ್ಚುವರಿ ಶುಲ್ಕ ಪಾವತಿಸಬೇಕಿದೆ.
ಇನ್ನು ಪುನರಾವರ್ತಿತವಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಶುಲ್ಕದಲ್ಲೂ ಏರಿಕೆಯಾಗಿದೆ. ಈ ಮೊದಲು ಒಂದು ವಿಷಯಕ್ಕೆ 448 ರೂಪಾಯಿ ಪಾವತಿಸಬೇಕಿತ್ತು. ಆದರೆ ಈ ಒಂದು ವಿಷಯಕ್ಕೆ 470 ರೂಪಾಯಿ ಪಾವತಿಸಬೇಕಿದೆ. ಇನ್ನು ಎರಡು ವಿಷಯಕ್ಕೆ 559 ರೂ,ನಿಂದ 587 ರೂಪಾಯಿಗೆ ಏರಿಕೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಮೂರು ಅಥವಾ ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ ಪರೀಕ್ಷೆ ಬರೆಯುವವರು 752 ರೂಪಾಯಿಗಳ ಬದಲಿಗೆ 790 ರೂಪಾಯಿ ಪಾವತಿಸಬೇಕು.
ಎಸ್.ಎಸ್.ಎಲ್.ಸಿ ನೋಂದಣಿ ಶುಲ್ಕವೂ ಏರಿಕೆಯಾಗಿದೆ. ಈ ಮೊದಲು ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ನೋಂದಣಿ ಶುಲ್ಕ 248 ರುಪಾಯಿ ಪಾವತಿಸಬೇಕಿತ್ತು. ಈಗ 260 ರೂಪಾಯಿಗೆ ಏರಿಕೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




