
ಪ್ರಗತಿವಾಹಿನಿ ಸುದ್ದಿ: ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕಾರ್ಖಾನೆಯ ಕ್ವಾಟ್ರಸ್ ನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ರೂಮ್ ನಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಗೋವಿಂದರಾಜ್ (51) ನೇಣಿಗೆ ಶರಣಾದ ವ್ಯಕ್ತಿ. ತಮಿಳುನಾಡಿನ ಸೇಲಂ ಮೂಲದ ಗೋವಿಂದರಾಜ್ ಕಳೆದ 13 ವರ್ಷದಿಂದ ವಿಐಎಸ್‌ಎಲ್ ಕೆಲಸ ಮಾಡುತ್ತಿದ್ದರು.
ಭಾನುವಾರವಷ್ಟೇ ಪತ್ನಿ, ಮಕ್ಕಳನ್ನು ಸೇಲಂಗೆ ಕಳುಹಿಸಿ ಭದ್ರಾವತಿ ನಗರದ ಸೇಂಟ್ ಚಾರ್ಲ್ಸ್ ಶಾಲೆಯ ಎದುರಿರುವ ಕ್ವಾಟ್ರಸ್‌ಗೆ ಬಂದಿದ್ದ ಗೋವಿಂದರಾಜ್ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆ ಗೋವಿಂದರಾಜ್ ಆಪ್ತ ಸಹಾಯಕ ಕರೆ ಮಾಡಿದ್ದಾರೆ. ಅನೇಕ ಬಾರಿ ಕರೆ ಮಾಡಿದರೂ ಕರೆಯನ್ನು ಸ್ವೀಕರಿಸದ ಕಾರಣ ಆತ ಕ್ವಾಟ್ರಸ್‌ಗೆ ತೆರಳಿ ಪರಿಶೀಲಿಸಿದ್ದಾರೆ. ಈ ವೇಳೆ ಡಿಜಿಎಂ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ.
ಭದ್ರವಾತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋವಿಂದರಾಜ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




