Film & EntertainmentKarnataka NewsLatest

*ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಅರಮನೆ ನಗರಿ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಈ ನಡುವೆ ಖ್ಯಾತ ನಟಿ ಕಾಜಲ್ ಅಗರ್ವಾಲ್ ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ.

ಅರಮನೆಗೆ ಆಗಮಿಸಿದ ಕಾಜಲ್ ಅಗರ್ವಾಲ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ವೇಳೆ ಅರಮನೆಯ ಇತಿಹಾಸ ಮತ್ತು ಮಹತ್ವದ ಬಗ್ಗೆ ಅಧಿಕಾರಿಗಳು ನಟಿಗೆ ವಿವರಿಸಿದರು.

ಅರಮನೆಯ ವೈಭವವನ್ನು ಕಾಜಲ್ ಅಗರ್ವಾಲ್ ಕಣ್ತುಂಬಿಕೊಂಡರು. ನಟಿ ಅರಮನೆಗೆ ಭೇಟಿ ನೀಡಿರುವ ವಿಷಯ ತಿಳಿಯುತ್ತಿದ್ದಂತೆ ಅವರನ್ನು ನೋಡಲು ಪ್ರವಾಸಿಗರು ಹಾಗೂ ಅಭಿಮಾನಿಗಳು ಮುಗಿಬಿದ್ದರು. ನೆಚ್ಚಿನ ನಟಿಯೊಂದಿಗೆ ಫೋಟೋ ಹಾಗೂ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button