Kannada NewsKarnataka NewsLatest

*BREAKING: ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಮತ್ತೆ ED ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ.

ಎರಡನೇ ಬಾರಿ ಇಡಿ ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಇದೇ ವೇಳೆ ಕೆಪಿಎಸ್ ಸಿ ಸದಸ್ಯೆ ಗೀತಾ ಅವರ ಮನೆ ಮೇಲೂ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದಿಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button