
ಪ್ರಗತಿವಾಹಿನಿ ಸುದ್ದಿ: ಸುಳ್ಯ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕರಿಕ್ಕಳ–ನಿಂತಿಕಲ್ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಶಾಸಕಿ ಭಾಗೀರಥಿ ಹಾಗೂ ಕಾರು ಚಾಲಕ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ.
ಮುಂದೆ ಹೋಗುತ್ತಿದ್ದ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಹೀಗಾಗಿ ಹಿಂದೆ ಇದ್ದ ಶಾಸಕಿ ಕಾರು ಮುಂದಿನ ಕಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಇನ್ನೋವಾ ಕಾರಿನ ಮುಂಭಾಗ ಜಖಂ ಆಗಿದೆ. ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




