CrimeKannada NewsKarnataka NewsLatest

*ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ*: *20 ವರ್ಷ ಕಠಿಣ ಜೈಲು ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ: ಸ್ನೇಹಿತೆಯ ಹುಟ್ಟುಹಬ್ಬದ ಪಾರ್ಟಿಗೆ ಕರೆದೊಯ್ಯುವುದಾಗಿ ನಂಬಿಸಿ ಸ್ವಂತ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 10 ಸಾವಿರ ರೂ. ದಂಡವನ್ನೂ ವಿಧಿಸಿ ತೀರ್ಪು ನೀಡಿದೆ.

2025ರಲ್ಲಿ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸ್ನೇಹಿತೆಯ ಹುಟ್ಟುಹಬ್ಬದ ಪಾರ್ಟಿಗೆ ಹೋಗೋಣ ಎಂದು ಮಗಳನ್ನು ನಂಬಿಸಿ ಕರೆದೊಯ್ದು ಕೃತ್ಯ ಎಸಗಿದ್ದ ಆರೋಪದಡಿ ತಂದೆ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಮಹಿಳಾ ಪೊಲೀಸ್ ಠಾಣೆಯ ಸಿಪಿಐ ನಯೂಮ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕ ಜಗದೀಶ್ ಸಂತ್ರಸ್ತೆಯ ಪರವಾಗಿ ವಾದ ಮಂಡಿಸಿದ್ದರು. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದೆ. ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ್ ಅವರು ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

*ನಂದಿನಿ ಹಾಲಿನ ದರ ಏರಿಕೆಗೆ ಸಂಪುಟ ಸಮ್ಮತಿ*: *ಅ.27ರ ಬಳಿಕ ಹೊಸ ದರ ಜಾರಿ ಸಾಧ್ಯತೆ* – Pragati Vahini

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button