Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಮುಂದುವರೆಯಲಿದೆ ಮಳೆ ಅಬ್ಬರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಮೂರು ದಿನಗಳ ಕಾಲ ಅಬ್ಬರಿಸಿದ್ದ ಮಳೆರಾಯ ನಿನ್ನೆಯಿಂದ ತಣ್ಣಗಾಗಿದ್ದು, ಇಂದು ಮೋಡಕವಿದ ವಾತಾವರಣವಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 7 ಮತ್ತು 8ರಂದು ಕರಾವಳಿ ಕರ್ನಾಟಕದ ಕೆಲವು ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಕಡೆ ಹಗುರ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇನ್ನು ಅಕ್ಟೋಬರ್ 8ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button