Kannada NewsNationalSports

*ಟಿ20 ಸರಣಿಗೆ ಟೀಮ್ ಇಂಡಿಯಾ ಪಟ್ಟಿ ಪ್ರಕಟ: ಆದರೆ ಐವರು ಆಟಗಾರರು ತಂಡದಿಂದ ಔಟ್*

ಪ್ರಗತಿವಾಹಿನಿ ಸುದ್ದಿ: ಭಾರತ ಮತ್ತು ನ್ಯೂಝಿಲೆಂಡ್ ನಡುವೆ ನಡೆಯುವ 5 ಸರಣಿ ಪಂದ್ಯ ಅಕ್ಟೋಬರ್ 22 ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟವಾಗಿದೆ.

ಈ ಸರಣಿಗಾಗಿ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಆದರೆ ಐವರು ಆಟಗಾರರನ್ನು ಕೈಬಿಡಲಾಗಿದೆ. ಅಂದರೆ ಏಷ್ಯನ್ ಗೇಮ್ಸ್​ ಟಿ20 ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದ ಐವರು ಆಟಗಾರನ್ನು ಈ ಬಾರಿ ಆಯ್ಕೆ ಮಾಡಲಾಗಿಲ್ಲ.

ಟಿ20 ತಂಡದಲ್ಲಿ ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಷದೀಪ್ ಸಿಂಗ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್. ಅವರನ್ನು ಆಯ್ಕೆ ಮಾಡಲಾಗಿದೆ.

ಯಶ್ ಠಾಕೂರ್, ಜಸ್​ಪ್ರೀತ್ ಬುಮ್ರಾ ,ವಾಷಿಂಗ್ಟನ್ ಸುಂದರ್, ವಿಪ್ರಾಜ್ ನಿಗಮ್, ರವಿ ಬಿಷ್ಣೋಯ್ ಅವರನ್ನು ಕೈಬಿಡಲಾಗಿದೆ.

ಏಷ್ಯನ್ ಗೇಮ್ಸ್‌ ತಂಡದಲ್ಲಿ ವೇಗಿಯಾಗಿ ಕಾಣಿಸಿಕೊಂಡಿದ್ದ ಯಶ್ ಠಾಕೂರ್ ಅವರನ್ನು ನ್ಯೂಝಿಲೆಂಡ್​ ವಿರುದ್ಧದ ಟಿ20 ಸರಣಿಯಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಪ್ರಿನ್ಸ್ ಯಾದವ್ ಅವರನ್ನು ಟೀಮ್ ಇಂಡಿಯಾಗೆ ಸೇರಿಸಿಕೊಳ್ಳಲಾಗಿದೆ.

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಬೌಲಿಂಗ್ ಸಾರಥ್ಯ ವಹಿಸಿದ್ದ ವಿಶ್ವದ ನಂಬರ್ ಒನ್ ವೇಗಿ ಜಸ್​ಪ್ರೀತ್ ಬುಮ್ರಾ ಅವರಿಗೆ ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್​ ವಿರುದ್ಧದ ಈ ದ್ವಿಪಕ್ಷೀಯ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಕಿವೀಸ್ ವಿರುದ್ಧದ ಟಿ20 ಸರಣಿಯಲ್ಲೂ ಬುಮ್ರಾ ಕಾಣಿಸಿಕೊಳ್ಳುವುದಿಲ್ಲ.

ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಪಾಕಿಸ್ತಾನ್ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ಧ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೂ ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್​ ವಿರುದ್ಧದ ಟಿ20 ಸರಣಿ ವೇಳೆ ವಿಶ್ರಾಂತಿ ನೀಡಲಾಗಿದೆ.

2026ರ ಏಷ್ಯನ್ ಗೇಮ್ಸ್‌ನ ಆರಂಭಕ್ಕೂ ಮುನ್ನ ಗಾಯಗೊಂಡಿದ್ದ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರ ಬದಲಿ ಆಟಗಾರನಾಗಿ ಭಾರತ ತಂಡಕ್ಕೆ ಚೊಚ್ಚಲ ಅವಕಾಶ ಪಡೆದಿದ್ದ ಯುವ ಲೆಗ್ ಸ್ಪಿನ್ನರ್ ವಿಪ್ರಾಜ್ ನಿಗಮ್ ಅವರನ್ನು ಟೀಮ್ ಇಂಡಿಯಾದಿಂದ ಕೈಬಿಡಲಾಗಿದೆ.

ಏಷ್ಯನ್ ಗೇಮ್ಸ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿರುವ ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಭಾರತ ಟಿ20 ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button