Belagavi NewsBelgaum NewsCrimeKannada News

*ಹೆರಾಯಿನ್ ಮಾರಾಟ ಪ್ರಕರಣ: ಆರೋಪಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾದಕ ವಸ್ತು ಹೆರಾಯಿನ್ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗೆ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹75 ಸಾವಿರ ದಂಡ ವಿಧಿಸಿದೆ.

ನ್ಯಾಯಾಧೀಶರಾದ ಗಂಗಾಧರ ಕೆ.ಎನ್. ಅವರು ಈ ಕುರಿತು ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 2 ವರ್ಷ 6 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಲಾಗಿದೆ.

ಶಿಕ್ಷೆಗೆ ಗುರಿಯಾದ ಆರೋಪಿ ಸಾವಂತವಾಡಿ ನಿವಾಸಿ ನಾಗೇಶ ಮಧುಕರ ಭಗತ್. 2024ರಲ್ಲಿ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ರೈತ ಭವನದ ಬಳಿ ಸಿಐಬಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ನಾಗೇಶ ಭಗತ್‌ನನ್ನು ಬಂಧಿಸಲಾಗಿತ್ತು.

ಆರೋಪಿ ಹೀರೋ ಡೆಸ್ಟಿನಿ ಸ್ಕೂಟರ್ (KA-07/SN-8953)ನಲ್ಲಿ ₹32,700 ಮೌಲ್ಯದ 11.02 ಗ್ರಾಂ ಹೆರಾಯಿನ್ ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ. ಪ್ರಕರಣದ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ಬಳಿಕ ನ್ಯಾಯಾಲಯ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button