
ಪ್ರಗತಿವಾಹಿನಿ ಸುದ್ದಿ: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಜೊತೆ ನಿರಂತರ ಸಂಪರ್ಕ ಹೊಂದಿ, ಠಾಣೆಯಲ್ಲಿನ ಆಗು ಹೋಗುಗಳನ್ನು ರವಾನಿಸುತ್ತಿದ್ದ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ಠಾಣೆಯ ಕಾನ್ಸ್‌ಟೇಬಲ್ ನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಎನ್.ಆರ್.ಪುರ ಠಾಣೆಯ ಕಾಂತೇಶ್ ಅಮಾನತಾದ ಕಾನ್ಸ್ ಟೇಬಲ್. ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅತ್ಯಾಚಾರ ಪ್ರಕರಣದ ಆರೋಪಿ ಸತೀಶ್ ಪಾತ್ರಿ ಕುಟುಂಬದ ಜೊತೆ ಕಾಂತೇಶ್ ನಿರಂತರ ಸಂಪರ್ಕದಲ್ಲಿದ್ದರು.
ಕಳೆದ ಒಂದು ತಿಂಗಳಿನಿಂದ ಅತ್ಯಾಚಾರ ಆರೋಪಿ ಸತೀಶ್ ತಲೆಮರೆಸಿಕೊಂಡಿದ್ದ. ಆರೋಪಿ ಸತೀಶ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ ಆರೋಪಿಗೆ ಠಾಣೆಯ ಸಂಪೂರ್ಣ ಮಾಹಿತಿಯನ್ನು ಕಾಂತೇಶ್ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




