Kannada NewsKarnataka NewsLatest

*ಅಮೇಜಾನ್ ಕಚೇರಿ ಬಳಿ ಟ್ರಾನ್ಸ್ ಫಾರ್ಮರ್ ಸ್ಫೋಟ: ಇಬ್ಬರು ಪಾದಚಾರಿಗಳ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಅಮೇಜಾನ್ ಕಚೇರಿಯ ಗೇಟ್ ಬಳಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಇಬ್ಬರು ಪಾದಚಾರಿಗಾಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗಲೂರು ಕ್ರಾಸ್ ಬಳಿಯಿರುವ ಅಮೇಜಾನ್ ಕಚೇರಿಯ ಗೇಟ್ ನಂಬರ್ 3ರ ಬಳಿ ಇರುವ ಟ್ರಾನ್ಸ್ ಫಾಅರ್ಮರ್ ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಇಬ್ಬರು ಹಾರಿ ಬಿದ್ದಿದ್ದಾರೆ.

ಘಟನೆಯಲ್ಲಿ ಬೆಂಕಿ ತಗುಲಿ ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನ ಅಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶಿಲನೆ ನದೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button