
ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಹಾಗೂ ವಿವಿಧ ಸಂಘಟನೆಗಳು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರತಿಭಟನಾ ಮೆರವಣಿಗೆಯಲ್ಲಿ ‘ಆಕಾಶವಾಣಿ ಭವನ’ಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಅಂಧಿ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಎಸ್ಐಆರ್ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ರಾಹುಲ್, ಪ್ರಿಯಾಂಕಾ ಸೇರಿದಂತೆ ಇಂಡಿಯಾ ಒಕ್ಕೂಟದ ಅನೇಕ ನಾಯಕರುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ನುಗ್ಗಲು ಯತ್ನಿಸಿದ್ದರು. ಈ ವೇಳೆ ಆಕಾಶವಾಣಿ ಭವನದ ಬಳಿ ಅವರನ್ನು ಪೊಲೀಸರು ತಡೆದಿದ್ದರು.
ಆಕಾಶವಾಣಿ ಭವನದ ಗೇಟ್ ಗಳನ್ನು ಹತ್ತಿ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ
ಎಸ್ಐಆರ್ ರದ್ದು ಹಾಗೂ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಮಂಗಳವಾರ ಇಂಡಿಯಾ ಒಕ್ಕೂಟದ ಸುಮಾರು 200 ಸಂಸದರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸಂಸತ್ತಿನ ಮುಖ್ಯ ದ್ವಾರದಿಂದ ಚುನಾವಣಾ ಆಯೋಗದ ಪ್ರಧಾನ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಗೆ ಹಮ್ಮಿಕೊಳ್ಳಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




