Belagavi NewsBelgaum NewsKannada NewsKarnataka NewsPolitics

*ಗುರುಭವನ ಉದ್ಘಾಟನೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಂಗಳೂರಿನ ಜಯನಗರದ ನಾಗನೂರು ಶ್ರೀ ಶಿವಬಸವ ಸ್ವಾಮೀಜಿ ಕಲ್ಯಾಣ ಕೇಂದ್ರದ ನವೀಕೃತ ‘ಗುರುಭವನ’ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.  

​ಡಂಬಳ-ಗದಗದ ಎಡೆಯೂರು  ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ ವಹಿಸಿದ್ದರು.  ನಾಗನೂರು ಶ್ರೀ ರುದ್ರಾಕ್ಷಿಮಠದ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ನೇತೃತ್ವದಲ್ಲಿ  ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.  

​ಸಮಾರಂಭದಲ್ಲಿ ಶಾಸಕರಾದ  ಮಹಾಂತ್ರೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ಪ್ರಮುಖರಾದ ಮಹಾಂತೇಶ ಬಿರಾದಾರ, ಕಲ್ಯಾಣ ಕೇಂದ್ರದ ಕಾರ್ಯದರ್ಶಿಗಳಾದ ಶಂಭು ಹಿರೇಮಠ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.  

​

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button