CrimeKannada NewsKarnataka NewsLatest

*ಮಕ್ಕಳಿಲ್ಲ, ತವರಿನಿಂದ ಹಣ ತರಲಿಲ್ಲವೆಂದು ಕತ್ತು ಹಿಸುಕಿ ಕೊಲೆ*: *ಪತ್ನಿಯನ್ನೇ ಕೊಂದ ಪತಿ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರಲಿಲ್ಲ ಎಂಬ ವಿಚಾರಕ್ಕೆ ದಂಪತಿ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಪತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಚಿಂಚೋಳಿ ಪಟ್ಟಣದ ಪ್ರಿಯಾಂಕಾ ಹಡಪದ್ (30) ಮೃತ ಮಹಿಳೆ. ವಕೀಲ ವೃತ್ತಿ ಮಾಡಿಕೊಂಡಿದ್ದ ಸೂರ್ಯಕಾಂತ್‌ ಹಣದಾಸೆಗೆ ಪತ್ನಿಗೆ ಚಟ್ಟ ಕಟ್ಟಿದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ನಡೆದಿದೆ.

ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಹಾಗೂ ತವರಿನಿಂದ ಹಣ ತರುವಂತೆ ಪತಿ ಕಿರುಕುಳ ನೀಡುತ್ತಿದ್ದ ಎಂದು ಪ್ರಿಯಾಂಕಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸೂರ್ಯಕಾಂತ್ ಕತ್ತು ಹಿಸುಕಿ ಪ್ರಿಯಾಂಕಾಳನ್ನು ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕೊಲೆಯ ಬಳಿಕ ಘಟನೆ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಸೂರ್ಯಕಾಂತ್ ಪ್ರಯತ್ನಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪ್ರಿಯಾಂಕಾ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸೂರ್ಯಕಾಂತ್‌ನನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button