Kannada NewsLatestNational

*ದೆಹಲಿಯಲ್ಲಿ ಮತ್ತೊಂದು ಕಟ್ಟಡ ಕುಸಿತ: ಹಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆ*

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಕಟ್ಟಡ ಕುಸಿದು 7 ಜನರು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ದೆಹಲಿಯಲ್ಲಿ ಮತ್ತೊಂದು ಕಟ್ಟಡ ಕುಸಿತ ಘಟನೆ ನಡೆದಿದೆ.

ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ 5 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ರಕ್ಷಣಾ ತಂದ, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ನಡುವೆ ಸೀಮಾಪುರಿ ಪ್ರದೇಶದಲ್ಲಿ ಬಹು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಸೀಮಾಪುರಿ ಗೋಲ್ ಚಕ್ಕರ್, ಡಿಎಲ್‌ಎಫ್ ಭೋಪೂರ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ. ಈ ಪ್ರದೇಶದಲ್ಲಿ ಸಂಚಾರ ಮಾಡಬೇಡಿ. ಘಟನಾ ಸ್ಥಳದ ಬಳಿ ವಾಹನಗಳನ್ನು ನಿಲ್ಲಿಸುವುದು, ಪಾರ್ಕ್ ಮಾಡುವುದು ಅಥವಾ ಗುಂಪುಗೂಡುವುದನ್ನು ಮಾಡಬೇಡಿ. ಸಂಚಾರ ಪೊಲೀಸರ ಸೂಚನೆಗಳನ್ನು ಪಾಲಿಸಿ ಎಂದು ದೆಹಲಿ ಸಂಚಾರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button