
ಪ್ರಗತಿವಾಹಿನಿ ಸುದ್ದಿ: ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಪೂರ್ವ ಸಿದ್ಧತೆಗಳನ್ನು ಸಹ ಮಾಡಿಕೊಳ್ಳುತ್ತಿದೆ.
ಚುನಾವಣೆಗೆ ಪೂರಕವೆಂಬಂತೆ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ನ ವರ್ಗವಾರು ಮೀಸಲಿರಿಸಿದ ಸ್ಥಾನಗಳ ಅಧಿಸೂಚನೆ ಪ್ರಕಟಿಸಿದೆ. ರಾಜ್ಯದಲ್ಲಿ ಒಟ್ಟು 1,129 ಜಿಲ್ಲಾ ಪಂಚಾಯಿತಿ ಸ್ಥಾನಗಳಿದ್ದು, ಈ ಪೈಕಿ ಪರಿಶಿಷ್ಟ ಜಾತಿ 225, ಪರಿಶಿಷ್ಟ ಪಂಗಡಕ್ಕೆ 102 ಸ್ಥಾನ ಮೀಸಲು ಸ್ಥಾನಗಳಿವೆ.
ಇನ್ನು ಹಿಂದುಳಿದ ವರ್ಗ ಎ-183, ಹಿಂದುಳಿದ ವರ್ಗ ಬಿ-43 ಸ್ಥಾನ ಸಾಮಾನ್ಯ ವರ್ಗಕ್ಕೆ 576 ಸ್ಥಾನ ಮೀಸಲಿವೆ. ಇದರಲ್ಲಿ ಇದೀಗ ರಾಜ್ಯ ಸರ್ಕಾರ ವರ್ಗವಾರು ಮೀಸಲು ಪ್ರಕಟಣೆ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




