Kannada NewsKarnataka NewsLatest

*ಶಿವಶಂಕರಪ್ಪ ಸಾಹುಕಾರ್ ಮತ್ತು ಗೀತಾ ಇಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್​​ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೊಳಗಗಿರುವ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಗೀತಾ ಅವರನ್ನು ಇಡಿ ವಶಕ್ಕೆ ನೀಡಿ ಕೋರ್ಟ್​ ಆದೇಶ ಹೊರಡಿಸಿದೆ.

ನಿನ್ನೆ ಬಂಧಿಸಲ್ಪಟ್ಟಿದ್ದ ಶಿವಶಂಕರಪ್ಪ ಸಾಹುಕಾರ್ ಹಾಗೂ ಗೀತಾ ಅವರನ್ನು ಇಡಿ ಅಧಿಕಾರಿಗಳು ಇಂದು ಕೋರ್ಟ್ ಗೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಿದ್ದರು.

ಈ ವೇಳೆ ಶಿವಶಂಕರಪ್ಪ ಪರ ವಕೀಲರು, ಪ್ರಕರಣದ ಯಾವುದೇ ಹಣ ರಿಕವರಿ ಆಗಿಲ್ಲ. ನಮ್ಮ ಕಕ್ಷಿದಾರರು ಎಲ್ಲೂ ಹೋಗಲ್ಲ, ಇಲ್ಲೇ ಇರ್ತಾರೆ. ತನಿಖೆಗೆ ಸಹಕರಿಸುತ್ತಾರೆ. ಕಸ್ಟಡಿಗೆ ಬೇಡ ಎಂದು ವಾದ ಮಂಡಿಸಿದರು. ವಾದ ಆಲಿಸಿದ ಬೆಂಗಳೂರಿನ 4ನೇ ಸಿಸಿಹೆಚ್ ನ್ಯಾಯಾಲಯ, ಅಂತಿಮವಾಗಿ ಶಿವಶಂಕರಪ್ಪ ಸಾಹುಕಾರ್ ಮತ್ತು ಬಿ.ವಿ.ಗೀತಾ ಅವರನ್ನು 13 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button