Belagavi NewsBelgaum NewsKannada NewsKarnataka NewsLatest

*ಸವದತ್ತಿ ಯಲ್ಲಮ್ಮ ದೇವಿ ಭಕ್ತರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸವದತ್ತಿಯ ಶ್ರೀ ಯಲ್ಲಮ್ಮಾದೇವಿ ದಸರಾ ಜಾತ್ರೆ ಅಕ್ಟೋಬರ್ 10ರಿಂದ 21ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಭಕ್ತರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಜಾತ್ರೆಯ ಪ್ರಮುಖ ದಿನಗಳಾದ ಅಕ್ಟೋಬರ್ 11, 13, 15, 17, 18 ಹಾಗೂ 19ರಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಬೆಳಗಾವಿ ಕೇಂದ್ರ ಹಾಗೂ ನಗರ ಬಸ್ ನಿಲ್ದಾಣಗಳಿಂದ ಸವದತ್ತಿ ಯಲ್ಲಮ್ಮಾ ಗುಡ್ಡಕ್ಕೆ ಹಾಗೂ ಯಲ್ಲಮ್ಮಾ ಗುಡ್ಡದಿಂದ ಬೆಳಗಾವಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಬಸ್‌ಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವಾಕರಸಾ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button