Kannada NewsLatestNational

*ಕಟ್ಟಡ ಕುಸಿತ ಪ್ರಕರಣ: 4 ತಿಂಗಳ ಗರ್ಭಿಣಿ ಸೇರಿ ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಕಟ್ಟಡ ಕುಸಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

4 ಮಹಡಿಯ ಕಟ್ಟಡದ ಮುಂಭಾಗದ ಭಾಗವು ದಿಢೀರ್ ಕುಸಿದುಬಿದ್ದ ಪರಿಣಾಮವಾಗಿ ಇಬ್ಬರು ಮಕ್ಕಳು ಹಾಗೂ 4 ತಿಂಗಳ ಗರ್ಭಿಣಿ ಸೇರಿ ಮೂವರು ಮೃತಪಟ್ಟಿದ್ದಾರೆ. ರಕ್ಷಣಾ ಸಿಬ್ಬಂದಿ ಹಾಗೂ ಸ್ಥಳೀಯರು ಇದುವರೆಗೆ 11 ಜನರನ್ನು ಅವಶೇಷಗಳ ಅಡಿಯಿಂದ ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಈ ಘಟನೆಯಲ್ಲಿ ಪಕ್ಕದಲ್ಲಿದ್ದ ಎರಡು ಮನೆಗಳಿಗೂ ಭಾಗಶಃ ಹಾನಿಯಾಗಿದೆ. ಮಂಗಳವಾರ ಸಂಜೆ ಉತ್ತರಾಖಂಡದಲ್ಲಿ ಸಂಭವಿಸಿದ ಭೂಕಂಪದ ಆಘಾತದಿಂದಾಗಿ ಈ ಕಟ್ಟಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದವು ಎಂದು ದೆಹಲಿ ಮಹಾನಗರ ಪಾಲಿಕೆ (MCD) ಹಾಗೂ ಸ್ಥಳೀಯರು ಶಂಕಿಸಿದ್ದಾರೆ. ಕಟ್ಟಡದ ಮಾಲೀಕರು ಮನೆ ಖಾಲಿ ಮಾಡಿಸುವ ಪ್ರಕ್ರಿಯೆಯಲ್ಲಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಈದ್ಗಾ ಮಚ್ಲಿ ಮಂಡಿ ಬಳಿಯ ದುಸಿಬ್ ವ್ಯಾಪ್ತಿಯಲ್ಲಿದ್ದ ಸುಮಾರು 225 ಚದರ ಅಡಿ ವಿಸ್ತೀರ್ಣದ ಈ ಕಟ್ಟಡ ಕುಸಿದ ತಕ್ಷಣವೇ ಸ್ಥಳೀಯರು ಕೈಯಿಂದಲೇ ಶಿಥಿಲಾವಶೇಷಗಳನ್ನು ತೆರವುಗೊಳಿಸಿ ರಕ್ಷಣಾ ಕಾರ್ಯಕ್ಕೆ ನೆರವಾದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button