*ತಮ್ಮ ವಿರುದ್ಧ ಸುಳ್ಳು ಸುದ್ದಿ ಹರಡಿದರೆ ಎಚ್ಚರ ಎಂದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಮ್ಮ ವಿರುದ್ಧ ಆಧಾರರಹಿತ ಆರೋಪಗಳು ಹಾಗೂ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಹೋರಾಟ ಮುಂದುವರಿಸುವುದಾಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
‘ಕಮಿಷನ್ ಹಣ ಬಳಸಿ ಹೆಲಿಕಾಪ್ಟರ್ ಖರೀದಿಸಿದ್ದಾರೆ’ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ಸುಳ್ಳು ಮಾಹಿತಿಗಳನ್ನು ಹರಡಲಾಗುತ್ತಿದೆ ಎಂದು ಆರೋಪಿಸಿದರು.
ಈ ಸಂಬಂಧ ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದ್ದು, ಆರೋಪ ಮಾಡಿರುವವರು ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಗಳಿಗೆ ಉತ್ತರ ನೀಡಲಿ ಎಂದು ಸತೀಶ್ ಜಾರಕಿಹೊಳಿ ಸವಾಲು ಹಾಕಿದರು.
ಇನ್ನು ಜಾರಿ ನಿರ್ದೇಶನಾಲಯದಿಂದ (ED) ಸಂಭವನೀಯ ನೋಟಿಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈವರೆಗೆ ತಮ್ಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
“ನೋಟಿಸ್ ಬಂದರೆ ಅದಕ್ಕೆ ಕಾನೂನುಬದ್ಧವಾಗಿ ಉತ್ತರಿಸುತ್ತೇನೆ. ನೋಟಿಸ್ ಜಾರಿಯಾದ ವಿಚಾರ ನಮಗೆ ತಿಳಿಯುವ ಮೊದಲೇ ಮಾಧ್ಯಮಗಳಿಗೆ ಮಾಹಿತಿ ಸಿಗುವ ಸಾಧ್ಯತೆಯೂ ಇದೆ” ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




