*ಕರ್ನಾಟಕದಲ್ಲಿ ಮುಂಗಾರು ದುರ್ಬಲ; ಆದರೆ ಈ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ಟೋಬರ್ 8ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಅ.9ರಂದು 6 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಅಕ್ಟೋಬರ್ 9ರಂದು ರಾಜ್ಯದ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ತುಮಕೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೋಲಾರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.
ಕರಾವಳಿ ಭಾಗದಲ್ಲಿ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




