Kannada NewsKarnataka NewsPolitics

*ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ವಿರುದ್ಧ ವಿಜಯಪುರದಲ್ಲಿ ಎಫ್ಐಆರ್ ದಾಖಲಾಗಿದೆ.

ಬದುಕಿರುವವರ ಹೆಸರನ್ನು ಮೃತಪಟ್ಟಿದ್ದಾರೆ ಎಂದು ಕಾಗದ ಪತ್ರ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರುನ ಹಿನ್ನೆಲೆಯಲ್ಲಿ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಜಯಪುರ ಕ್ಷೇತ್ರದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಶಾಸಕ ಯತ್ನಾಳ್ ಅವರು ಒಟ್ಟು 1,054 ಜನರ ಪಟ್ಟಿಯನ್ನು ನೀಡಿದ್ದರು. ಅದರಲ್ಲಿ 8 ಮುಸ್ಲಿಂ ಮತದಾರರು ಮೃತಪಟ್ಟಿದ್ದಾರೆ ಎಂದು ಸುಳ್ಳು ಮರಣ ಪ್ರಮಾಣಪತ್ರಗಳನ್ನು ಲಗತ್ತಿಸಿ, ತಮ್ಮ ಅಧಿಕೃತ ಶಾಸಕರ ಲೆಟರ್‌ಹೆಡ್‌ನಲ್ಲಿ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಅರ್ಜಿ ಸಲ್ಲಿಸಿದ್ದರು ಎಂಬ ಆರೋಪ ಕೇಳಿಬಂದಿದೆ.

ಪಟ್ಟಿಯಲ್ಲಿದ್ದ ಮತದಾರರನ್ನು ಬೂತ್ ಮಟ್ಟದ ಅಧಿಕಾರಿಗಳು ಮತ್ತು ಸಂಘಟನೆಗಳು ಮನೆ ಮನೆಗೆ ಹೋಗಿ ಪರಿಶೀಲಿಸಿದಾಗ, ಮೃತಪಟ್ಟಿದ್ದಾರೆ ಎನ್ನಲಾದ ಮತದಾರರು ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರು ಇದೀಗ ಶಾಸಕ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಅಯಿಸಿ ದೂರು ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button