Kannada NewsLatestNationalPolitics

*ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ತಳ್ಳಿದ ರಾಹುಲ್ ಗಾಂಧಿ; ಮೊಣಕೈಯಿಂದ ಗುದ್ದಿದ ಪ್ರಿಯಾಂಕಾ!*

ಮತ್ತೊಂದು ಕೇಸ್ ದಾಖಲು

ಪ್ರಗತಿವಾಹಿನಿ ಸುದ್ದಿ: ಎಸ್ ಐಆರ್ ಪ್ರಕ್ರಿಯೆ ಖಂಡಿಸಿ ಹಾಗೂ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಅಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರನ್ನ ತಳ್ಳಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಅವರು, ಈ ಘಟನೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ರೀಲ್ಸ್ ಮಾಡುವ ಉತ್ಸಾಹದಲ್ಲಿ ರಾಹುಲ್ ಗಾಂಧಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನ ತಳ್ಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ವಿರುದ್ಧವೂ ಆರೋಪ ಕೇಳಿಬಂದಿದೆ. ಪ್ರಿಯಾಂಕಾ ಗಾಂಧಿ ಅವರು ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರನ್ನ ಮೊಣಕೈಯಿಂದ ಗುದ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಿಜೆಪಿ ಸೋಷಿಯಲ್‌ ಮೀಡಿಯಾ ಸಹ ಸಂಚಾಲಕ ಅರುಣ್ ಯಾದವ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ರಾಜಕೀಯ ಎಲ್ಲ ಮಿತಿಗಳನ್ನೂ ಮೀರಿದಾಗ: ಪ್ರಿಯಾಂಕಾ ಗಾಂಧಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ಮೊಣಕೈಯಿಂದ ಹೊಟ್ಟೆ ಭಾಗಕ್ಕೆ ಜೋರಾಗಿ ಗುದ್ದಿರುವುದು ಕಂಡುಬಂದಿದೆ. ಕಾಂಗ್ರೆಸ್ ಶಿಬಿರದಿಂದ ಕಂಡುಬಂದಿರುವ ಈ ದೃಶ್ಯಗಳು ನಾಚಿಕೆಗೇಡಿನವು ಎಂದು ಟೀಕಿಸಿದ್ದಾರೆ.

ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಮತ್ತು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button