*ಬೆಳಗಾವಿಯಲ್ಲಿ ಬಸ್–ಟಿಪ್ಪರ್ ಡಿಕ್ಕಿ: ಚಾಲಕ ಸಾವು, 12 ಪ್ರಯಾಣಿಕರಿಗೆ ಗಂಭೀರ ಗಾಯ*

ಪ್ರತಿಗತಿವಾಹಿ ಸುದ್ದಿ, ಬೆಳಗಾವಿ: ಕೆಎಸ್ಆರ್ಟಿಸಿ ಬಸ್ವೊಂದು ಟಿಪ್ಪರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ನಡೆದಿದೆ. ಗಂಗಾವತಿಯಿಂದ ಕೊಲ್ಹಾಪುರದತ್ತ ತೆರಳುತ್ತಿದ್ದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಟಿಪ್ಪರ್ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬಸ್ ಚಾಲಕ ಸಂಗಪ್ಪ ತಳವಾರ ಮೃತಪಟ್ಟಿದ್ದಾರೆ. ಅವರು ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಗಾಯಗೊಂಡ 12 ಪ್ರಯಾಣಿಕರನ್ನು ಕೂಡಲೇ ಸಂಕೇಶ್ವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಅವರಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.ಘಟನೆ ಕುರಿತು ಸಂಕೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಅಪಘಾತದ ಕಾರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




