EducationKarnataka NewsLatest

*ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಹಾಗೂ 2ರ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 2027ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಪ್ರಕಟಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯ ಜೊತೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಿದೆ.

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 22ರಿಂದ ಆರಂಭವಾಗಿ ಏಪ್ರಿಲ್ 5ರಂದು ಮುಕ್ತಾಯಗೊಳ್ಳಲಿದೆ. ಪರೀಕ್ಷೆ-2 ಮೇ 24ರಿಂದ ಆರಂಭವಾಗಿ ಮೇ 31ರವರೆಗೆ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವಿಷಯವಾರು ವೇಳಾಪಟ್ಟಿ:

ಮಾರ್ಚ್ 22, 2027 ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ

ಮಾರ್ಚ್ 25, 2027 ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ

ಮಾರ್ಚ್ 27, 2027 ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ

ಮಾರ್ಚ್ 30, 2027 ಗಣಿತ, ಸಮಾಜಶಾಸ್ತ್ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ

ಏಪ್ರಿಲ್ 2, 2027 ತೃತೀಯ ಭಾಷೆ: ಹಿಂದಿ (NCERT), ಹಿಂದಿ, ಕನ್ನಡ (ಪುನರಾವರ್ತಿತರಿಗೆ), ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ

ಏಪ್ರಿಲ್ 3, 2027 ಜೆ.ಟಿ.ಎಸ್. ವಿಷಯಗಳು ಮತ್ತು ಅರ್ಥಶಾಸ್ತ್ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ

ಏಪ್ರಿಲ್ 5, 2027 ಸಮಾಜ ವಿಜ್ಞಾನ ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ

ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 22 ಕೊನೆಯ ದಿನ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಮಂಡಳಿ 15 ದಿನಗಳ ಕಾಲಾವಕಾಶ ನೀಡಿದೆ. ವೇಳಾಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ ಅಥವಾ ತಕರಾರುಗಳಿದ್ದರೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಅಕ್ಟೋಬರ್ 22ರೊಳಗೆ ಸಲ್ಲಿಸಬಹುದು.ವೇಳಾಪಟ್ಟಿ ತಾತ್ಕಾಲಿಕವಾಗಿರುವುದರಿಂದ ವಿದ್ಯಾರ್ಥಿಗಳು ಅಂತಿಮ ವೇಳಾಪಟ್ಟಿಗಾಗಿ ಮಂಡಳಿಯ ಅಧಿಕೃತ ಪ್ರಕಟಣೆಗೆ ಕಾಯಬೇಕು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button