Belagavi NewsBelgaum NewsCrimeKannada NewsKarnataka News

*ಪ್ರಜ್ವಲ್ ರೇವಣ್ಣ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಪ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಆದೇಶಿಸಲಾಗಿದೆ.

ಕಾರಾಗೃಹದ ಡಿಜಿಪಿ ಅಲೋಕ್ ಕುಮಾರ್ ಅವರ ಆದೇಶದ ಮೇರೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಗೆ ಶಿಫ್ಟ್ ಮಾಡಲಾಗುತ್ತಿದೆ. ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಅವರನ್ನು ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಕರೆತರಲಾಗುವ ಸಾಧ್ಯತೆ ಇದೆ.

ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ ಪತ್ತೆಯಾಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು. ಇದೀಗ ಪ್ರಕರಣದ ಬೆನ್ನಲ್ಲೇ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button