
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಅಜೀತ್, ರಾಕೇಶ್, ಸಂದೀಪ್, ಮತ್ತು ಶೃತಿ ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು, ಕ್ಯಾಂಟರ್ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲ ವಿಜಯಪುರ ಜಿಲ್ಲೆಯವರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




