CrimeKarnataka NewsLatest

*ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಟೋ ಪಲ್ಟಿ*: *ಕಾಂಗ್ರೆಸ್ ಮುಖಂಡ ಸಾವು*

ಪ್ರಗತಿವಾಹಿನಿ ಸುದ್ದಿ: ಆಟೋ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಬೋರಯ್ಯ (ಬುಸಿಯಪ್ಪ, 65) ಮೃತಪಟ್ಟಿದ್ದು, ಹದಿಮೂರು ಮಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಬೋರಯ್ಯ ಅವರ ಪುತ್ರ ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಪಸಾಗರ ಮತ್ತು ಕೊಂಡಹಳ್ಳಿ ಗ್ರಾಮಗಳ ನಡುವೆ ಈ ಅಪಘಾತ ಸಂಭವಿಸಿದೆ. ಆಟೋಗೆ ದಿಢೀರ್ ಹಸುವೊಂದು ಅಡ್ಡ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಆಟೋದಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಮಾಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಬೋರಯ್ಯ ಅವರ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ನಂತರ ಸ್ವಗ್ರಾಮ ಅರಳೆಮರದ ದೊಡ್ಡಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಬೋರಯ್ಯ ಈ ಹಿಂದೆ ಸೀಗೆಕುಪ್ಪೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನಮನ್ನಣೆ ಗಳಿಸಿದ್ದರು. ಬೋರಯ್ಯ ನಿಧನಕ್ಕೆ ಅರಳೆಮರದ ದೊಡ್ಡಿ, ಸೀಗೆಕುಪ್ಪೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಸಂತಾಪ ಸೂಚಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button